"ಮುಖ್ಯಮಂತ್ರಿ ಅವರಿಂದ ಸಾರ್ವಜನಿಕ ಸೇವೆಗೆ ಯಾಂತ್ರೀಕೃತ ಕಸ ಗುಡಿಸುವ ಯಂತ್ರಗಳ ಲೋಕಾರ್ಪಣೆ

"(ಮೈಸೂರು)ರೈತರ ಆತ್ಮಹತ್ಯೆ ಪರಿಹಾರಕ್ಕೆ ಕೈಸಾಲವನ್ನು ಪರಿಗಣಿಸಬೇಕು - ಮುಖ್ಯಮಂತ್ರಿ

"ಮೀಸಲಾತಿ ಶೇ. 70 ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ - ಮುಖ್ಯಮಂತ್ರಿ

"ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣ - ಸಮಗ್ರ ತನಿಖೆ ಮಾಡಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಮುಖ್ಯಮಂತ್ರಿ ಪತ್ರ

"ಕನ್ನಡದಲ್ಲಿ ವಾದ ಮಂಡಿಸುವ ವಕೀಲರನ್ನೂ ಸನ್ಮಾನಿಸಿ ಗೌರವಿಸಲು ಮುಖ್ಯಮಂತ್ರಿ ಸಲಹೆ

"ನಗರದಲ್ಲಿ 115.33 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ನವೀಕೃತ ರಸ್ತೆಗಳ ಲೋಕಾರ್ಪಣೆ

"(ಚಿತ್ರದುರ್ಗ) ಕೇಂದ್ರ ಸರ್ಕಾರ ಸಹಕರಿಸಿದರೆ ಸಾಲ ಮನ್ನಾ - ಮುಖ್ಯಮಂತ್ರಿ

"ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

"‘5ನೇಯ ವರ್ಷದೆಡೆಗೆ ಭರವಸೆಯ ನಡಿಗೆ’

ತಾಜಾಸುದ್ದಿ

ಮೇ 22

ವಿಧಾನ ಸೌಧ (ಬೆಂಗಳೂರು): ಬೆಂಗಳೂರು ನಗರ ನೈರ್ಮಲ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ 9.15 ಕೋಟಿ ರೂ ವೆಚ್ಚದಲ್ಲಿ ಖರೀದಿಸಲಾಗಿರುವ ಯಾಂತ್ರೀಕೃತ ಕಸ ಗುಡಿಸುವ ಯಂತ್ರಗಳನ್ನು ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಿದರು.

ಮೇ 21

ಹಾಸನ: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ನಗರಕ್ಕೆ ನೀರು ಸರಬರಾಜು ಮಾಡುವ "ಅಮೃತ್" ಯೋಜನೆ ಮತ್ತು ನಗರದ ಉದ್ಯಾನವನಗಳ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಮೇ 21

ಹಾಸನ: ಹಾಸನ ನಗರದಲ್ಲಿ ಕರ್ನಾಟಕ ಕುರುಹೀನ ಶೆಟ್ಟಿ ಜನಜಾಗೃತಿ ಮಹಾಸಭಾ ಆಯೋಜಿಸಿದ ಜನಜಾಗೃತಿ ಸಮಾವೇಶವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಮೇ 20

ಮೈಸೂರು: ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಮೈಸೂರು ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದರು. ಸಭೆಯಲ್ಲಿ ಅವರು, ರೈತರು ಬ್ಯಾಂಕು, ಸೊಸೈಟಿಗಳಲ್ಲಿ ಮಾತ್ರವಲ್ಲ, ಕೈಸಾಲ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರು ಸಹ ಪರಿಹಾರಕ್ಕೆ ಪರಿಗಣಿಸುವಂತೆ ತಿಳಿಸಿದರು.

ಮೇ 19

ಗೃಹ ಕಛೇರಿ ಕೃಷ್ಣಾ (ಬೆಂಗಳೂರು): ಇಂದಿರಾ ಕ್ಯಾಂಟೀನ್ ಸಂಬಂಧ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.

ಮೇ 19

ಬೆಂಗಳೂರು: ಐಎಎಸ್ ಅದಿಕಾರಿ ಅನುರಾಗ್ ತಿವಾರಿ ಮೃತ ಪಟ್ಟಿರುವ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸುವಂತೆ ಕೋರಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಮೇ 19

ಬೆಂಗಳೂರು: ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ನಡೆದ ‘ಪತ್ರಿಕಾ ಸಂವಾದ’ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡರು.

ಮೇ 19

ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ರಾಜರಾಜೇಶ್ವರಿ ವಿಧಾನ ಸಭೆ ಕ್ಷೇತ್ರದಲ್ಲಿ ಉದ್ಯಾನವನ, ಆಟದ ಮೈದಾನ ಮತ್ತು ಬೃಹತ್ ನೀರುಗಾಲುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಮೇ 19

ವಿಧಾನ ಸೌಧ (ಬೆಂಗಳೂರು): ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ತೀರ್ಪು ನೀಡಿದ 69 ನ್ಯಾಯಾಧೀಶರಿಗೆ ಹಾಗೂ 19 ಸರ್ಕಾರಿ ಅಭಿಯೋಜಕರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವ ಸಮರ್ಪಣೆ ಮಾಡಿದರು.