ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸಂಸದರ ಸಭೆ ವಿಧಾನಸೌಧದಲ್ಲಿ ನಡೆಯಿತು

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ (ಬೆಂಗಳೂರು), ಡಿಸೆಂಬರ್ 04, 2018

-ರಾಜ್ಯದ ನೆಲ, ಜಲ, ಅಭಿವೃದ್ಧಿ, ಕೈಗಾರಿಕೆ, ಕೃಷಿ, ವೈಮಾನಿಕ, ರಕ್ಷಣಾ ಇಲಾಖೆ ಸೇರಿದಂತೆ ಒಟ್ಟು 15 ಇಲಾಖೆಗಳಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದಿದೆ. ಈ ಪ್ರಸ್ತಾವನೆ ಜಾರಿಯಾಗಲು ಸಹಕರಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದರು.

-ಇಂದು ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸಂಸದರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ. ಸ್ಥಳೀಯ ರಕ್ಷಣಾ ಇಲಾಖೆ ಅಧಿಕಾರಿಗಳು ಕ್ರಮವಹಿಸದೇ ಇರುವುದರಿಂದ ಕೆಲಸಗಳು ವಿಳಂವಾಗಿದೆ. ಈ ಎಲ್ಲಾ ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆಯಲು ಸಂಸದರು ಸಹಕರಿಸಬೇಕು ಎಂದರು.

-ಕೇಂದ್ರ ನೈಸರ್ಗಿಕ ವಿಕೋಪ ಪರಿಹಾರ ನಿಯಮಾವಳಿಗಳು ಪ್ರಸ್ತುತ ಸನ್ನಿವೇಶಕ್ಕೆ ಪೂರಕವಾಗಿರುವುದಿಲ್ಲ. ಕೇಂದ್ರವು ಈ ಆಧಾರದಲ್ಲಿ ಅತ್ಯಲ್ಪ ಪರಿಹಾರ ಮೊತ್ವನ್ನು ನಿಗದಿಪಡಿಸಿದೆ. ಈ ನಿಯಮಾವಳಿಗಳನ್ನು ಬದಲಿಸಿ ಹೆಚ್ಚು ಪರಿಹಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ತರಬೇಕು. ಹಾಗೂ ನರೇಗಾ ಯೋಜನೆಯಲ್ಲಿ ರಾಜ್ಯ ಸರ್ಕಾರ ವೆಚ್ಚ ಮಾಡಿರುವ 964 ಕೋಟಿ ರೂ.ಗಳನ್ನು ಮರುಪಾವತಿಸಲು ಒತ್ತಡ ತರಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

-ಸಭೆಯಲ್ಲಿ ಸಂಸದರಾದ ಸಂಗಣ್ಣ, ಪ್ರಕಾಶ್ ಹುಕ್ಕೇರಿ, ಪಿ.ಸಿ.ಮೋಹನ್, ಗದ್ದಿಗೌಡರ್, ಆಸ್ಕರ್ ಫರ್ನಾಂಡಿಸ್, ಕೆ.ಸಿ.ರಾಮಮೂರ್ತಿ, ಜಿ.ಇ. ಚಂದ್ರಶೇಖರ್, ಡಾ.ಎಲ್. ಹನುಮಂತಯ್ಯ, ಭಗವಂತ ಕೌಲ್, ಕುಪೇಂದ್ರ ರೆಡ್ಡಿ, ಡಿ.ಕೆ.ಸುರೇಶ್, ಡಿ.ಎನ್. ಚಂದ್ರಪ್ಪ, ಎಸ್.ಪಿ, ಮುದ್ದ ಹನುಮೇಗೌಡ, ಪ್ರಹ್ಲಾದ್ ಜೋಶಿ, ಎಲ್.ಆರ್.ಶಿವರಾಮೇಗೌಡ, ಡಿ.ಎಸ್.ಉಗ್ರಪ್ಪ, ಬಿ.ವಿ.ನಾಯಕ್, ಜಿ.ಎಂ. ಸಿದ್ದೇಶ್ವರ್ ಭಾಗವಹಿಸಿದ್ದರು.

-ಸಚಿವರುಗಳಾದ ಆರ್.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ, ಕೆ.ಜೆ.ಜಾರ್ಜ್, ಶಿವಶಂಕರ ರೆಡ್ಡಿ, ರಮೇಶ್ ಜಾರಕಿಹೊಳಿ, ನಾಡಗೌಡ, ವೆಂಕಟರಮಣಪ್ಪ, ಡಿ.ಸಿ.ತಮ್ಮಣ್ಣ, ಸಿ.ಎಸ್. ಪುಟ್ಟರಾಜು ಭಾಗವಹಿಸಿದ್ದರು.

***********************************************