ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಹೆತ್ತವರ ಬುದ್ಧಿಮಾತಿನ ಹಿಂದಿನ ಕಾಳಜಿ ಅರಿತುಕೊಳ್ಳಿ:ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಕಿವಿಮಾತು

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ಜನವರಿ 11, 2019

-ಮುಖ್ಯಮಂತ್ರಿ ಹೆಚ್‍.ಡಿ. ಕುಮಾರಸ್ವಾಮಿ ಅವರು ನಿಮ್ಹಾನ್ಸ್‍ಗೆ ಭೇಟಿ ನೀಡಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದನೆನ್ನಲಾದ ಯುವಕ ವೇಣುಗೋಪಾಲನ ಆರೋಗ್ಯ ವಿಚಾರಿಸಿ ಸ್ಥೈರ್ಯ ತುಂಬಿದರು.

-ಟೇಲರಿಂಗ್ ವೃತ್ತಿ ಮಾಡುತ್ತಿದ್ದ ತಾಯಿ ಎಸ್‍ಎಸ್‍ಎಲ್‍ಸಿಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣನಾಗಿದ್ದ ವೇಣುಗೋಪಾಲ್ ಪರೀಕ್ಷೆ ಬರೆದು ತೇರ್ಗಡೆಯಾಗುವಂತೆ ಬುದ್ಧಿ ಹೇಳಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿತ್ತು.

-ಈ ಹಿನ್ನೆಲೆಯಲ್ಲಿ ವೇಣುಗೋಪಾಲನಿಗೆ ಬುದ್ಧಿ ಹೇಳಿದ ಮುಖ್ಯಮಂತ್ರಿಗಳು, ಹೆತ್ತವರು ಹೇಳಿದ ಮಾತಿಗೆ ನೊಂದುಕೊಂಡು ಇಂತಹ ಕ್ರಮ ಕೈಗೊಳ್ಳುವುದು ಸರಿಯಲ್ಲ; ಹೆತ್ತವರ ಇಂತಹ ಬುದ್ಧಿಮಾತುಗಳ ಹಿಂದಿನ ಕಾಳಜಿಯನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

-ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಯುವಕ ತಾನು ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ. ನಂಗೆ ಆ ಕ್ಷಣದಲ್ಲಿ ಏನಾಯಿತೊ ಗೊತ್ತಿಲ್ಲ ಎಂದು ಹೇಳಿದ್ದಾನೆ.

ಮಾನ್ಯ ಮುಖ್ಯಮಂತ್ರಿ

-ಪರೀಕ್ಷೆಯ ಸಮಯ ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಆತಂಕಕ್ಕೆ ಒಳಗಾಗುವುದು ಸಹಜ. ಇಂತಹ ಸಂದರ್ಭದಲ್ಲಿ ಮಕ್ಕಳು ಯಾವುದೇ ಒತ್ತಡವಿಲ್ಲದೆ ಅಭ್ಯಾಸ ಮಾಡುವ ವಾತಾವರಣವನ್ನು ಶಾಲೆ/ ಕಾಲೇಜುಗಳು ಹಾಗೂ ಹೆತ್ತವರು ನಿರ್ಮಿಸಬೇಕು. ಅಂತೆಯೇ ಮಕ್ಕಳು ತಮ್ಮ ಶಿಕ್ಷಕರು , ಪೋಷಕರ ಬುದ್ಧಿಮಾತುಗಳನ್ನು ಸದ್ಭಾವನೆಯಿಂದ ಸ್ವೀಕರಿಸಿ, ಓದಿನತ್ತ ಗಮನಹರಿಸಬೇಕೆಂದು ಕಿವಿಮಾತು ಹೇಳಿದ್ದಾರೆ.

*********************************