ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವಿಕಲಚೇತನರಿಗೆ ಉದ್ಯೊಗನೀಡಲು ಉದ್ಯಮಿಗಳ ಸಭೆ - ಮುಖ್ಯಮಂತ್ರಿ

know_the_cm

ಹುಬ್ಬಳ್ಳಿ 12 ಆಗಸ್ಟ್, 2018 :ಜನತಾದರ್ಶನದ ಮೂಲಕ ಹಲವು ವಿಕಲಚೇತನರು ನನ್ನನ್ನು ಭೇಟಿ ಮಾಡಿ ಉದ್ಯೊಗ ಕಲ್ಪಿಸಲು ಮನವಿ ಮಾಡುತ್ತಿದ್ದಾರೆ. ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವಿಕಲಚೇತನರಿಗೆ ಆಯಾ ಜಿಲ್ಲೆಗಳಲ್ಲಿ ಇರುವ ಕೈಗಾರಿಕೆಗಳಲ್ಲಿ ಕೆಲಸ ಕೊಡಿಸಲು ಉದ್ದೆಶಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಹಾಗೂ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತು ಜಿಲ್ಲೆಯ ಉದ್ಯಮಿಗಳ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಹವಾಮಾನ ವೈಪರೀತ್ಯದಿಂದ ಆಲಮಟ್ಟಿ ಪ್ರವಾಸ ರದ್ದುಗೊಳಿಸಿದ ಅವರು ಇಂದು ಹುಬ್ಬಳ್ಳಿಯ ವೇಮನ ಬೀದಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ವಾರ ಮತ್ತೆ ಪ್ರಯಾಣ ಕೈಗೊಂಡು ಆಲಮಟ್ಟಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತೆನೆ. ಕೊಪ್ಪಳ ಜಿಲ್ಲೆಯ ಮುನಿರಬಾದ್ ಬಳಿಯ ತುಂಗಭದ್ರಾ ಜಲಾಶಯವು ಕೂಡ ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಆಗಸ್ಟ್ ೧೫ ರಂದು ಅಲ್ಲಿ ಬಾಗಿನ ಅರ್ಪಿಸಲಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆಯಿಂದಾಗಿ ಹಲವಾರು ಜಿಲ್ಲೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಸೆಪ್ಟಂಬರ್ ೦೧ ರಿಂದ ತಿಂಗಳಲ್ಲಿ ಒಂದು ದಿನ ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಒಂದು ಗ್ರಾಮ ಪಂಚಾಯತಿ ಅಥವಾ ಹೋಬಳಿಯಲ್ಲಿ ರೈತರೊಂದಿಗೆ ಕಾಲ ಕಳೆದು ಅವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರದಿಂದ ಸ್ಪಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೆನೆ.

ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಶೇ.೯೬% ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ಯಾವುದೇ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಗೆ ಸಾಕಷ್ಟು ಬೇಡಿಕೆ ಇಲ್ಲ ಎಂದು ಜಿ.ಪಂ.ಸಿಇಓ ತಿಳಿಸಿದ್ದಾರೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣ ಮತ್ತಿತರ ಸಮುದಾಯಿಕ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಉದ್ಯೊಗ ನೀಡಲು ಸೂಚಿಸಲಾಗಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆಯ ಖಾತ್ರಿ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅನಿರೀಕ್ಷಿತ ಭೇಟಿ ನೀಡಲು ಸೂಚಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಶೇ.೯೬% ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ಯಾವುದೇ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರುವ ಒಂದು ವಾರದೊಳಗೆ ಮಹದಾಯಿ ವಿವಾದ ಕುರಿತು ತೀರ್ಪು ಪ್ರಕಟವಾಗಬಹುದು. ಆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರೌಡಿ ಶೀಟರ್‌ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು.

ಮುಂಬಯಿ ಹಾಗೂ ಹೈದರಾಬಾದ್ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಕಲಬುರ್ಗಿಯಲ್ಲಿ ಸೌರಶಕ್ತಿ ಉತ್ಪಾದನೆ, ಬೀದರ್‌ನಲ್ಲಿ ಕೃಷಿ ಉಪಕರಣ, ಕೊಪ್ಪಳದಲ್ಲಿ ಎಲೆಕ್ಟಾçನಿಕ್ ಗೊಂಬೆಗಳು, ಬಳ್ಳಾರಿಯಲ್ಲಿ ಜವಳಿ, ಬೆಳಗಾವಿಯಲ್ಲಿ ಪೀಠೋಪಕರಣ ಉತ್ಪಾದನಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ಪ್ರತಿ ವರ್ಷ ಪ್ರತಿ ಜಿಲ್ಲೆಗೆ ಎರಡು ಸಾವಿರ ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು. ಯುವಕರು ಉದ್ಯೊಗ ಅರಸಿ ಗೋವಾ, ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸಲು ಈ ಕ್ಲಸ್ಟರ್‌ಗಳು ಸಹಕಾರಿಯಾಗಲಿವೆ.

ಕಳೆದ ಎರಡು ತಿಂಗಳ ಕಾಲ ಬೆಂಗಳೂರಿನಲ್ಲಿಯೇ ಕುಳಿತು ರೈತರ ಸಾಲ ಮನ್ನಾ ಹಣ ಕ್ರೊಢೀಕರಣಕ್ಕೆ ಯೋಜನೆ ರೂಪಿಸಲಾಯಿತು. ೯೪೪೮ ಕೋಟಿ ರೂಪಾಯಿಗಳ ಸಹಕಾರಿ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಹಾಗೂ ಹಿಂದನ ಮನ್ನಾದ ೪೦೦೦ ಕೋಟಿ ಬಾಕಿ ಹಣವನ್ನು ಸೇರಿ ಒಟ್ಟು ಸುಮಾರು ೧೩೫೦೦ ಕೋಟಿ ರೂಪಾಯಿಗಳನ್ನು ಸಹಕಾರಿ ಬ್ಯಾಂಕುಗಳಿಗೆ ಪಾವತಿಸಬೇಕಾಗಿದೆ. ಯಾವ ತಿಂಗಳಿನಲ್ಲಿ ಎಷ್ಟು ಹಣ ಪಾವತಿಸಲಾಗುವುದು ಎಂದು ಸಹಕಾರಿ ಸಂಸ್ಥೆಗಳಿಗೆ ತಿಳಿಸಲಾಗುತ್ತಿದೆ. ರೈತರಿಗೆ ಹೊಸ ಸಾಲ ನೀಡಲು ಬ್ಯಾಂಕುಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುವುದು. ಆಂಧ್ರ ಪ್ರದೇಶ ಮಾದರಿಯಲ್ಲಿ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ ಪದ್ದತಿಯನ್ನು ರೈತರಲ್ಲಿ ಅಳವಡಿಸಿಕೊಳ್ಳಲು ಪ್ರೊತ್ಸಾಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಹೊರ ವರ್ತುಲ ರಸ್ತೆಯನ್ನು ನಿರ್ಮಿಸಲಾಗುವುದು. ಬೈಪಾಸ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿಸಿ ವಿಸ್ತರಿಸಲಾಗುವುದು.

ಬೆಂಗಳೂರಿನಲ್ಲಿ ಇರುವ ಕಚೇರಿಗಳ ಸ್ಥಳಾಂತರ

ರಾಜಧಾನಿಯಲ್ಲಿರುವ ಕೃಷ್ಣಾಭಾಗ್ಯ ಜಲ ನಿಗಮ, ಉಪ ಲೋಕಾಯುಕ್ತರು ಹಾಗೂ ಮಾಹಿತಿ ಆಯುಕ್ತರ ಕಾರ್ಯಾಲಯಗಳನ್ನು ಬೆಳಗಾವಿ ಹಾಗೂ ಕಲಬುರ್ಗಿ ವಿಭಾಗಗಳಿಗೆ ಸ್ಥಳಾಂತರಿಸಲು ಉದ್ದೆಶಿಸಲಾಗಿದೆ. ಕೆಶಿಪ್ ಕಚೇರಿಯನ್ನು ಈಗಿರುವ ಸ್ಥಳದಲ್ಲಿ ಯಾವುದೇ ಕಾಮಗಾರಿಗಳು ಇಲ್ಲದಿರುವದರಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಕಾಮಗಾರಿಗಳು ಇರುವ ಪ್ರದೇಶಕ್ಕೆ ಈ ಕಚೇರಿಯನ್ನು ವರ್ಗಾಯಿಸುವ ಪರಿಪಾಠ ಮೊದಲಿನಿಂದಲೂ ಇದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿಮಾಡಲು ಸೂಚಿಸಲಾಗಿದೆ. ಉತ್ತರ ಕರ್ನಾಟಕದ ಜನರು ಮೆಚ್ಚುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತೆನೆ ಎಂದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಎಂ ದೀಪಾ, ಜಿ.ಪಂ.ಸಿಇಓ ಸ್ನೆಹಲ್ ಆರ್, ಹು-ಧಾ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಸಂಗೀತಾ ಅವರಿಂದ ಜಿಲ್ಲೆಯ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ, ಎಂ.ಎಸ್ ಅಕ್ಕಿ, ಹನುಮಂತಪ್ಪ ಅಲ್ಕೊಡ್, ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಮೋಹನ ಹಿರೇಮನಿ ಮತ್ತಿತರರು ಇದ್ದರು.