ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಜಲ ಜೀವನ್ ಮಿಷನ್ ಯೋಜನೆ: 15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕದ ಗುರಿ

know_the_cm

(ಗೃಹ ಕಚೇರಿ ಕೃಷ್ಣಾ,ಬೆಂಗಳೂರು), ಮೇ 20, 2020

-ಭಾರತ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

-ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಲಾ ಶೇ. 50ರ ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ 1150 ಕೋಟಿ ರೂ. ಅನುದಾನ ಮಂಜೂರಾಗಿದೆ.

-ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ನಿಗದಿ ಪಡಿಸಲಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಈ ಗುರಿ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.

-ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನೂ ಸಂಯೋಜಿಸಿ, 2022-23 ರೊಳಗೆ ರಾಜ್ಯದಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸುವಂತೆ ಸಲಹೆ ನೀಡಿದರು.

-ಪ್ರಾರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು.

-ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ..ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

*************