ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ರಾಜ್ಯ ಸಮಗ್ರ ವಿದ್ಯಾರ್ಥಿ ವೇತನ ಪೋರ್ಟಲ್ ಲೋಕಾರ್ಪಣೆ

know_the_cm

ಗೃಹಕಚೇರಿ ಕೃಷ್ಣಾ (ಬೆಂಗಳೂರು) ಸೆಪ್ಟೆಂಬರ್ 05:

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಗಳನ್ನು ಕ್ರಮಬದ್ಧವಾಗಿ ವಿತರಿಸಲು ಅನುಕೂಲವಾಗುವಂತೆ ಸಿದ್ದಪಡಿಸಿರುವ ರಾಜ್ಯ ಸಮಗ್ರ ವಿದ್ಯಾರ್ಥಿ ವೇತನ ಪೋರ್ಟಲನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೋಕಾರ್ಪಣೆಗೋಳಿಸಿದರು.

ಈ ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವಿದ್ಯಾರ್ಥಿ ವೇತನವನ್ನು ವರ್ಗಾಯಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಿಂದ ಅತ್ಯಧಿಕ ವಿದ್ಯಾರ್ಥಿಗಳಿಗೆ ನೆರವು

2017-18ರಲ್ಲಿ 16 ಲಕ್ಷ ವಿದ್ಯಾರ್ಥಿಗಳಿಗೆ 62736 ಲಕ್ಷ ರೂ ಪಾವತಿ

ರಾಜ್ಯದ ಅಭಿವೃದ್ಧಿ ಇಲಾಖೆಗಳಾದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಮೆಟ್ರಿಕ್-ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗಿದೆಯಲ್ಲದೆ ವಿದ್ಯಾರ್ಥಿ ವೇತನ ವಿತರಿಸುವಲ್ಲಿ ಆಗುತ್ತಿದ್ದ ವಿಳಂಬ ತಪ್ಪಲಿದೆ ಎಂದು ಹೇಳಿದರು.