ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಶಿಕ್ಷಕರ ಕೊರತೆಯನ್ನು ನೀಗಿಸಲು ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ : ಸಿ ಎಂ ಘೋಷಣೆ

know_the_cm

ಮೈಸೂರು ಸೆಪ್ಟೆಂಬರ್ 10

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಡ, ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಾರೆ. ಇವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು. ಸದರಿ ಕಾಲೇಜನ್ನು ಸ್ಥಳಾಂತರಿಸದೇ ಇಲ್ಲೇ ಉಳಿಸಿಕೊಂಡು ಬೇಕಿರುವ 18 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇಕಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈ ಸಾಲಿನಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿಗಾಗಿ 1 ಸಾವಿರ ಕೋಟಿ ರೂಗಳನ್ನು ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್, ಶಾಸಕ ಎಲ್ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯಿಮಾ ಸುಲ್ತಾನ ನಜೀರ್ ಅಹಮದ್, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

know_the_cm

ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಕೊಡಗು ನೆರೆ ಸಂತ್ರಸ್ತರಿಗೆ 23 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.