ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮೈಸೂರು ನಗರ ಪ್ರಗತಿಗೆ ನೀಲಿನಕ್ಷೆ ಸಲ್ಲಿಸಿ - ಮುಖ್ಯಮಂತ್ರಿ

know_the_cm

ಮೈಸೂರು ಸೆಪ್ಟೆಂಬರ್ 10

-ಮೈಸೂರು ನಗರ ಪಾರಂಪರಿಕ ನಗರವಾಗಿದ್ದು, ನಗರದ ಅಭಿವೃದ್ಧಿಗಾಗಿ ನೀಲಿನಕ್ಷೆ ತಯಾರಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

-ಮೈಸೂರು ನಗರದಲ್ಲಿ 2-3 ವರ್ಷಗಳಿಂದ ಮಳೆಗಾಲದಲ್ಲಿ ಉಂಟಾಗುವ ತೊಂದರೆಗಳ ಬಗ್ಗೆ ಪಟ್ಟಿ ಮಾಡಿಕೊಂಡು ಸರಿಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

-ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಂದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ಮೈಸೂರಿಗೆ ಬರುತ್ತಾರೆ. ಇಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಬರುವುದರಿಂದ ವಸತಿನಿಲಯದ ಕೊರತೆ ಉಂಟಾಗುತ್ತದೆ. ಆದರಿಂದ ಮೈಸೂರು ಜಿಲ್ಲೆಗೆ ಹೆಚ್ಚಿನ ವಸತಿನಿಲಯಕ್ಕೆ ಅವಶ್ಯಕತೆ ಇದೆ. ಅಧಿಕಾರಿಗಳು ಮೈಸೂರು ಜಿಲ್ಲೆಯಲ್ಲಿ ಅವಶ್ಯಕವಾಗಿರುವ ವಸತಿನಿಲಯಗಳನ್ನು ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸಿ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿ.ಎ ನಿವೇಶನಗಳನ್ನು ಗುರುತಿಸುವಂತೆ ತಿಳಿಸಿದರು.

-ವಸತಿ ರಹಿತ ಕುಟುಂಬಗಳ ಬಗ್ಗೆ ವಿವರವಾದ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವಿವರ ಸಲ್ಲಿಸಬೇಕು, ಜಿಲ್ಲೆಯಲ್ಲಿ ಪ್ರತಿಯೊಂದು ಕುಟುಂಬಕ್ಕೂ ಸೂರು ಸಿಗುವಂತೆ ನೋಡಿಕೊಳ್ಳಬೇಕು, ಸಮೀಕ್ಷೆಯಲ್ಲಿಯಾವುದೇ ಲೋಪವಾಗದಂತೆ ಕ್ರಮ ವಹಿಸುವಂತೆ ತಿಳಿಸಿದರು.

-ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಡವರು ಹಾಗೂ ಗ್ರಾಮೀಣರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇವರಿಗೆ ಉತ್ತಮ ಸೇವೆ ದೊರಕಬೇಕು.

-ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ನೊಂದವರಿಗೆ ಮೈಸೂರು ಜಿಲ್ಲಾ ಆಡಳಿತ ಉತ್ತಮ ಯೋಜನೆ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡುವಂತೆ ತಿಳಿಸಿದರು.

-ನೆರೆಯ ಕೊಡಗು ಜಿಲ್ಲೆಗೆ ಹೋಲಿಸಿದ್ದಲ್ಲಿ, ಮೈಸೂರು ಜಿಲ್ಲೆಯಲ್ಲಿ ತೀವ್ರ ಸ್ವರೂಪದ ಮಳೆ ಹಾನಿ ಆಗಿರುವುದಿಲ್ಲ. ನಂಜನಗೂಡು, ಪಿರಿಯಾಪಟ್ಟಣ, ಹೆಚ್.ಡಿ ಕೋಟೆ ತಾಲ್ಲೂಕುಗಳಲ್ಲಿ ಕೆಲವು ಮನೆಗಳಿಗೆ ಹಾನಿಯಾಗಿದೆ. ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾ ಆಡಳಿತ ಯಶಸ್ವಿ ಕಾರ್ಯನಿರ್ವಹಣೆ ಮಾಡಿದೆ ಎಂದರು.

-ಮೈಸೂರು ಜಿಲ್ಲೆಯಲ್ಲಿ 2018 ರ ಏಪ್ರಿಲ್ನಿಂದ ಒಟ್ಟು 15 ಪ್ರಾಣಿಗಳ ಹಾನಿಯಾಗಿದೆ. ಇದಕ್ಕೆ 4.3 ಲಕ್ಷ ರೂಗಳ ಪರಿಹಾರ ವಿತರಣೆ ಮಾಡಲಾಗಿದೆ. ಆಗಸ್ಟ್ನಲ್ಲಿ ಸುರಿದ ಭಾರಿ ಮಳೆ/ಪ್ರವಾಹದಿಂದ ಮಾನವ ಹಾನಿ ಆಗಿರುವುದಿಲ್ಲ. ಇತರೆ ಸಂದರ್ಭಗಳಲ್ಲಿ ಸುರಿದ ಮಳೆಗೆ ಒಟ್ಟು ಜಿಲ್ಲೆಯಲ್ಲಿ ಕಳೆದ ಏಪ್ರಿಲ್ನಿಂದ 3 ಮಾನವ ಹಾನಿಯಾಗಿದ್ದು, ರೂ. 15.00 ಲಕ್ಷ ಪರಿಹಾರ ಒದಗಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಮಳೆ/ಪ್ರವಾಹ ವಿಕೋಪದಿಂದ ಒಟ್ಟು 734 ಮನೆಗಳಿಗೆ ಧಕ್ಕೆಯಾಗಿದ್ದು, ರೂ. 139.53 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಸಭೆಗೆ ಮಾಹಿತಿ ನೀಡಿದರು.

-ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ.ಮಹೇಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.