ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಮುಖ್ಯಮಂತ್ರಿ ಅವರಿಂದ ಹಾಸನ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

know_the_cm

ಹಾಸನ ಸೆಪ್ಟೆಂಬರ್ 23

ವೈದ್ಯಕೀಯ ಶಿಕ್ಷಣ ಇಲಾಖೆ--ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ ರೂ.1653 ಲಕ್ಷಗಳ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಕಟ್ಟಡಗಳ ಶಂಕುಸ್ಥಾಪನೆ ಹಾಗೂ ಹಲವು ಉಪಕರಣಗಳನ್ನು ಉದ್ಘಾಟಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ--ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರೂ.100 ಲಕ್ಷಗಳ ಅಂದಾಜು ವೆಚ್ಚದಲ್ಲಿ ಮೌಲಾನ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ಈ ಕಟ್ಟಡಗಳನ್ನು ನಿರ್ಮಾಣ ಕಾಮಗಾರಿಯ ಉದ್ಘಾಟನೆ ನೆರವೇರಿಸಲಾಯಿತು.

ಲೋಕೋಪಯೋಗಿ ಇಲಾಖೆ--ಲೋಕೋಪಯೋಗಿ ಇಲಾಖೆ, ಹಾಸನ ಇಲಾಖೆ ವತಿಯಿಂದ ರೂ.6,310ಲಕ್ಷಗಳ ಅಂದಾಜು ವೆಚ್ಚದಲ್ಲಿ ವಿವಿಧ ಇಲಾಖೆಗಳ ಕಟ್ಟಡಕಾಮಗಾರಿಗಳು ಹಾಗೂ ಹಾಸನ ನಗರದ ಸುತ್ತಲಿನ ರಸ್ತೆಗಳ ಅಭಿವೃದ್ಧಿ ಈ ಕೆಳಕಂಡ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಯಿತು.

ಆಯುಷ್ ಇಲಾಖೆ--ಆಯುಷ್ ಇಲಾಖೆ, ವತಿಯಿಂದ 2018-19ನೇ ಸಾಲಿನಲ್ಲಿ ಹಾಸನ ನಗರದಲ್ಲಿ ನಿರ್ಮಾಣಗೊಂಡಿರುವ 140ಲಕ್ಷ ರೂ ವೆಚ್ಚದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಮಾಡಲಾಯಿತು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ--ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಜಿಲ್ಲಾ ಪಂಚಾಯತ್ ವತಿಯಿಂದ ಹಾಸನ ಜಿಲ್ಲೆಯಲ್ಲಿ ಒಟ್ಟು ರೂ.955 ಲಕ್ಷಗಳ ಅಂದಾಜು ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ--ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊಳೆನರಸೀಪುರ ತಾಲ್ಲೂಕಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡಗಳನ್ನು ರೂ.869 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ಇಂದು ಉದ್ಘಾಟನೆ ನೆರವೇರಿಸಿದರು.

ಜಲಸಂಪನ್ಮೂಲ ಇಲಾಖೆ--ಜಲಸಂಪನ್ಮೂಲ ಇಲಾಖೆ ವತಿಯಿಂದ ಕಾವೇರಿ ನೀರಾವರಿ ನಿಗಮದ ವತಿಯಿಂದ ಜಿಲ್ಲೆಯ ಹಾಸನ ತಾಲ್ಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಜಲಾನಯನ ಪ್ರದೇಶ ಅಭಿವೃದ್ಧಿಪಡಿಸಲು ಪಿಕ್ಅಪ್ನ ಅಭಿವೃದ್ಧಿ ರೂ.435.00 ಲಕ್ಷಗಳ ವೆಚ್ಚದ ಕಾಮಗಾರಿ.

-ಹಾಸನ ಜಿಲ್ಲೆ ರೂ.490.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ತಾಲ್ಲೂಕು, ದೊಡ್ಡಕುಂಚ ಗ್ರಾಮದ ಬಳಿ ಒಂಟಿ ಗುಡ್ಡ ಏತ ನೀರಾವರಿ ಯೋಜನೆಯ ಪುನಶ್ಚೇತನ ಕಾಮಗಾರಿ.

-ರೂ 12,200ಲಕ್ಷಗಳ ಅಂದಾಜು ವೆಚ್ಚದಲ್ಲಿಹೊಳೆನರಸೀಪುರ ತಾಲ್ಲೂಕು, ಕಟ್ಟೆಬೆಳಗುಳಿ ಗ್ರಾಮದ ಹತ್ತಿರ ಶ್ರೀ ರಾಮ ದೇವರ ಹಣೆಕಟ್ಟು ಆದುನೀಕರಣ ಯೋಜನೆ

-ರೂ.33,300ಲಕ್ಷಗಳ ಅಂದಾಜು ವೆಚ್ಚದಲ್ಲಿ ಹೇಮಾವತಿ ನದಿಯಿಂದ ಹಾಸನ ತಾಲ್ಲೂಕಿನ ದುದ್ದ, ಶಾಂತಿಗ್ರಾಮದ ಹಳ್ಳಿಗಳಲ್ಲಿ ಹೊಣಗಿರುವ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ-- ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರೂ.5373.64 ಲಕ್ಷಗಳ ವೆಚ್ಚದಲ್ಲಿ ಕೊಳಗೇರಿ ಪ್ರದೇಶದಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ ಪ್ರದಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಾಣ ಕಾಮಗಾರಿ

ಹಿಂದುಳಿದ ವರ್ಗಗಳ ಇಲಾಖೆ--ಹಿಂದುಳಿದ ವರ್ಗಗಳ ಇಲಾಖೆ, ಹಾಸನ2018-19ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಾಸನ ನಗರದಲ್ಲಿ ಡಿ.ದೇವರಾಜು ಅರಸು ಭವನ ನಿರ್ಮಿಸಿದ್ದು ಉದ್ಘಾಟನೆ ಹಾಗೂ 1,350.ಲಕ್ಷಗಳ ಅಂದಾಜು ವೆಚ್ಚದಲ್ಲಿ ನಂತರದ ಬಾಲಕರ / ಬಾಲಕಿಯರ ವಿದ್ಯಾರ್ಥಿ ನಿಲಯಗಳ ನಿರ್ಮಾಣ ಕಾಮಗಾರಿಗಳಿಗೆ ಉದ್ಘಾಟನೆ / ಶಂಕುಸ್ಥಾಪನೆ ನೆರವೇರಿಸಲಾಯಿತು.

-ರೂ.500.00ಲಕ್ಷಗಳ ಅಂದಾಜು ವೆಚ್ಚದಲ್ಲಿ ಹೇಮಾವತಿ ಯೋಜನೆ ಯಲ್ಲಿ ಹಾಸನ ತಾಲ್ಲೂಕು, ಗೊರೂರು ಹತ್ತಿರ ಹೆಮಾವತಿ ಹಣೆಕಟ್ಟು ಸಮೀಪ ಸುಸರ್ಜಿತವಾದ ಅತಿಥಿ ಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ.

ನಗರ ಸಭೆ, ಹಾಸನ--ಹಾಸನ ನಗರ ಸಭೆ ವತಿಯಿಂದ 2018-19ನೇ ಸಾಲಿನಲ್ಲಿ ಹಾಸನ ನಗರದಲ್ಲಿ 3ನೇ ಹಂತದ ನಗರೋತ್ತಾನ ಯೋಜನೆಯಡಿ ರೂ.3,500.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ರಸ್ತೆಗಳು / ಚರಂಡಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಸಮಾಜ ಕಲ್ಯಾಣ ಇಲಾಖೆ--ಸಮಾಜ ಕಲ್ಯಾಣ ಇಲಾಖೆ, ಹಾಸನ ವತಿಯಿಂದ ರೂ.1,166.86 ಲಕ್ಷಗಳ ವೆಚ್ಚದಲ್ಲಿ ಇಲಾಖೆಯ ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಮುಖ್ಯಮಂತ್ರಿಗಳಿಂದ ಉದ್ಘಾಟನೆ ನೆರವೇರಿಸಿದರು.

ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ--ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹಾಸನ ವತಿಯಿಂದ ಹಾಸನ ನಗರದ ಬಿ.ಕಾಟೀಹಳ್ಳಿ ಎಸ್.ಬಿ.ಎಂ.ಕಾಲೋನಿಯಲ್ಲಿ ರೂ.147 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಜಿಲ್ಲಾ ಕಚೇರಿ ಕಟ್ಟಡ ಉದ್ಘಾಟನೆ ನೆರವೇರಿಸಲಾಯಿತು.

ಗ್ರಾಮೀಣ ಕುಡಿಯುವ ನೀರು--ಗ್ರಾಮೀಣ ಕುಡಿಯುವ ನೀರು ಇಲಾಖೆ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಮತ್ತು ಇತರೆ ಹಳ್ಳಿಗಳಿಗೆ ಡಿ.ಬಿ.ಒ.ಟಿ. ಯೋಜನೆಯಡಿ ಶಾಶ್ವತ ಮತ್ತು ಸುರಕ್ಷಿತ ಕುಡಿಯುವ ನೀರು ರೂ.19,264.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ--ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಹಾಸನ 2018-19ನೇ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ರೂ.4,200 ಲಕ್ಷಗಳ ವೆಚ್ಚದಲ್ಲಿ ಪ್ರಾದೇಶಿಕ ಕಾರ್ಯಗಾರ ಕಟ್ಟಡದ ಉನ್ನತೀಕರಣವನ್ನು ಕಾಮಗಾರಿಗೆ ಚಾಲನೆ.

ಕರ್ನಾಟಕ ರಾಜ್ಯ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮ--ಕರ್ನಾಟಕ ರಾಜ್ಯ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ವತಿಯಿಂದ ರೂ.150 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕಟ್ಟಡವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉದ್ಘಾಟನೆ ನೆರವೇರಿಸಿದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ--ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರೂ.300 ಲಕ್ಷಗಳ ಅಂದಾಜು ವೆಚ್ಚದಲ್ಲಿ ನಗರದ ಬಿ.ಎಂ ರಸ್ತೆಯಲ್ಲಿ ನಿರ್ಮಿಸಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಘಾಟನೆ ನೆರವೇರಿಸಿದರು.

ನಗರ ನೀರು ಸರಬರಾಜು ಇಲಾಖೆ--ನಗರ ನೀರು ಸರಬರಾಜು ಇಲಾಖೆ ವತಿಯಿಂದ ರೂ.2,438.ಲಕ್ಷ ವೆಚ್ಚದಲ್ಲಿ ಹಾಸನ ನಗರದಲ್ಲಿ ಅಮೃತ್ ಯೋಜನೆಯಡಿ ನೀರು ಸರಬರಾಜು ವಿತರಣಾ ಜಾಲ ಅಳವಡಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.