ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧ - ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಮಾನ್ಯ ಮುಖ್ಯಮಂತ್ರಿ

ನವದೆಹಲಿ, ಅಕ್ಟೋಬರ್ 06

-ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಇನ್ನೊಂದು ತಿಂಗಳೊಳಗಾಗಿ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

-ಅವರು ನವದೆಹಲಿಯಲ್ಲಿ'ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಸಮ್ಮಿಟ್' ನಲ್ಲಿ ಮಾತನಾಡುತ್ತಿದ್ದರು.

-'ನಮ್ಮ ಮೆಟ್ರೋ' ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಿದ್ದೇವೆ. ಆದರೆ ಇದೊಂದರಿಂದಲೇ ಸಂಚಾರ ದಟ್ಟಣೆ ಪರಿಹಾರ ಸಾಧ್ಯವಿಲ್ಲ. ಇದನ್ನು ಅರಿತ ನಮ್ಮ ಸರ್ಕಾರ ಎಲೆವೇಟೆಡ್ ಕಾರಿಡಾರ್ ನಿರ್ಮಿಸಲು ಉದ್ದೇಶಿಸಿದೆ. ಆದರೆ ಇದಕ್ಕೆ ಕೆಲವರ ವಿರೋಧವಿದೆ. ಎಲ್ಲರ ಮನವೊಲಿಸಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರ ಸುಗಮ ಸಂಚಾರ, ಮಾಲಿನ್ಯ ನಿಯಂತ್ರಣ ಮತ್ತು ಎಲ್ಲ ರೀತಿಯ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

-ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇಂಧನ ಬೆಲೆಯನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದರಿಂದ ಸಮಸ್ಯೆಗೆ ಪರಿಹಾರ ದೊರೆಯಲಾರದು ಎಂದು ನುಡಿದರು.

-ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸಂವಿಧಾನದತ್ತವಾದ ಕೆಲವು ಅಧಿಕಾರಗಳನ್ನು ಹಿಂಪಡೆಯುತ್ತಿದೆ. ಇದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

-ಸಂವಾದದಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಗವಹಿಸಿದ್ದರು. ಸಿಎನ್ಎನ್ ನ್ಯೂಸ್ 18 ಉಪ ಪ್ರಧಾನ ಸಂಪಾದಕ ಆನಂದ್ ನರಸಿಂಹನ್ ಸಂವಾದ ನಡೆಸಿಕೊಟ್ಟರು.